Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:31 - ಕನ್ನಡ ಸತ್ಯವೇದವು C.L. Bible (BSI)

31 ನರಮಾನವನನ್ನು ಸ್ವಾಮಿ ಸದಾಕಾಲಕ್ಕೂ ತೊರೆದುಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಕರ್ತನು ನಿರಂತರಕ್ಕೂ ಕೈ ಬಿಡುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಕರ್ತನು ಸದಾಕಾಲಕ್ಕೂ ಬಿಟ್ಟುಬಿಡುವವನಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೋವನು ಜನರನ್ನು ಶಾಶ್ವತವಾಗಿ ತೊರೆದುಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಏಕೆಂದರೆ ಕರ್ತದೇವರು ಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:31
15 ತಿಳಿವುಗಳ ಹೋಲಿಕೆ  

ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆ ತಗ್ಗಿಸುವಂತೆ ಮಾಡುವೆನು. ಆದರೆ ಸದಾಕಾಲಕ್ಕೂ ಅಲ್ಲ, ಎಂದು ಹೇಳಿದ್ದಾರೆ,” ಎಂದನು.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು