Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:32 - ಕನ್ನಡ ಸತ್ಯವೇದವು C.L. Bible (BSI)

32 ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:32
15 ತಿಳಿವುಗಳ ಹೋಲಿಕೆ  

ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


“ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು