Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:41 - ಕನ್ನಡ ಸತ್ಯವೇದವು C.L. Bible (BSI)

41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ತಿರುಗಿಸಿ ಸ್ತುತಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ಎತ್ತಿಕೊಳ್ಳುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:41
10 ತಿಳಿವುಗಳ ಹೋಲಿಕೆ  

ಎತ್ತಿರುವೆ ಪ್ರಭೂ, ಹೃನ್ಮನಗಳನು ನಿನ್ನತ್ತ I ಇಟ್ಟಿರುವೆ ಭರವಸೆ ನಿನ್ನಲೆ ದೇವಾ ಸನ್ನುತ II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II


ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ I ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು