Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:42 - ಕನ್ನಡ ಸತ್ಯವೇದವು C.L. Bible (BSI)

42 “ನಾವು ಅವಿಧೇಯರಾಗಿ ಪಾಪಮಾಡಿದೆವು ನೀನು ಕ್ಷಮಿಸಲಿಲ್ಲ ನಮ್ಮನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷಮಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷವಿುಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 “ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:42
16 ತಿಳಿವುಗಳ ಹೋಲಿಕೆ  

ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ನಿಮ್ಮ ಪಿತೃಗಳು ಈಗಲೂ ಇದ್ದಾರೆಯೇ? ಪ್ರವಾದಿಗಳು ಸದಾಕಾಲ ಇರುವರೆ?


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II


ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು