Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:43 - ಕನ್ನಡ ಸತ್ಯವೇದವು C.L. Bible (BSI)

43 “ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಕೊಂದು ಹಾಕಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಹತಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟೆ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದುಹಾಕಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ. ಕನಿಕರಿಸದೆ ಕೊಂದು ಹಾಕಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:43
12 ತಿಳಿವುಗಳ ಹೋಲಿಕೆ  

ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಸಿಟ್ಟುಗೊಂಡು ಅವರನ್ನು ಹಿಂದಟ್ಟು ನಿನ್ನ ಆಕಾಶದ ಕೆಳಗಿನಿಂದ ಅವರನ್ನು ಅಳಿಸಿಹಾಕು".


ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II


ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II


ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು