Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:48 - ಕನ್ನಡ ಸತ್ಯವೇದವು C.L. Bible (BSI)

48 ಸ್ವಜನರು ನಾಶವಾದ ಕಾರಣದಿಂದಾಗಿ ಹರಿಯುತ್ತಿದೆ ನನ್ನ ಕಣ್ಣೀರು ತೊರೆಯಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಸ್ವಜನರು ನಾಶವಾದಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ನನ್ನ ಜನರ ನಾಶದ ನಿಮಿತ್ತವಾಗಿ, ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:48
11 ತಿಳಿವುಗಳ ಹೋಲಿಕೆ  

ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಜನರು : “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು