Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:50 - ಕನ್ನಡ ಸತ್ಯವೇದವು C.L. Bible (BSI)

50 ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ನನ್ನ ಕಣ್ಣುಗಳು ನಿರಂತರವಾಗಿ ಅಶ್ರುಧಾರೆ ಸುರಿಸುವುದನ್ನು, ಎಂದಿಗೂ ಬಿಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ನನ್ನ ನೇತ್ರವು ನಿರಂತರವಾಗಿ ಅಶ್ರುಧಾರೆಯನ್ನು ಸುರಿಸುವದು, ಎಂದಿಗೂ ಬಿಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೆಹೋವನೇ, ಕೆಳಗಿರುವ ನಮ್ಮನ್ನು ನೀನು ಬಗ್ಗಿ ನೋಡುವತನಕ ನಾನು ಗೋಳಾಡುತ್ತಲೇ ಇರುವೆನು! ನೀನು ಪರಲೋಕದಿಂದ ನಮ್ಮನ್ನು ನೋಡುವತನಕ ನಾನು ಗೋಳಾಡುತ್ತಲೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ವಿಶ್ರಮಿಸಿಕೊಳ್ಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:50
9 ತಿಳಿವುಗಳ ಹೋಲಿಕೆ  

ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ನಗರದ ಯುವತಿಯರ ದುರ್ಗತಿಯನ್ನು ನೋಡಿ ಅಳುತ್ತಿರುವ ನನ್ನನ್ನು ಕಾಡುತ್ತಿದೆ ಕಣ್ಣುರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು