Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:52 - ಕನ್ನಡ ಸತ್ಯವೇದವು C.L. Bible (BSI)

52 “ಹಕ್ಕಿಯನ್ನು ಬೇಟೆಯಾಡುವವರೋ ಎಂಬಂತೆ ನಿಷ್ಕಾರಣ ವೈರಿಗಳು ಬೆನ್ನಟ್ಟಿ ಓಡಿಬಂದರು ನನ್ನ ಹಿಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಿಷ್ಕಾರಣವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:52
15 ತಿಳಿವುಗಳ ಹೋಲಿಕೆ  

ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು?


ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II


ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II


ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II


ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II


ನಗರದ ಯುವತಿಯರ ದುರ್ಗತಿಯನ್ನು ನೋಡಿ ಅಳುತ್ತಿರುವ ನನ್ನನ್ನು ಕಾಡುತ್ತಿದೆ ಕಣ್ಣುರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು