Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:53 - ಕನ್ನಡ ಸತ್ಯವೇದವು C.L. Bible (BSI)

53 ನನ್ನನ್ನು ಗುಳಿಯಲ್ಲಿಳಿಸಿ ಕಲ್ಲು ಮುಚ್ಚಿದರು ನನ್ನ ಪ್ರಾಣ ತೆಗೆಯಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲು ಮುಚ್ಚಿ ನನ್ನ ಪ್ರಾಣವನ್ನು ಕಳೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ನನ್ನ ಪ್ರಾಣವನ್ನು ಒಂದು ಗುಂಡಿಯಲ್ಲಿ ಕೊನೆಗಾಣಿಸಲು ಅವರು ಪ್ರಯತ್ನಿಸಿದರು. ಅವರು ನನಗೆ ಕಲ್ಲುಗಳನ್ನು ತೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ, ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:53
9 ತಿಳಿವುಗಳ ಹೋಲಿಕೆ  

ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.


“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.


ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.


ಎನ್ನೊಡೆಯರೇ, ಅರಸರೇ, ದಯವಿಟ್ಟು ಆಲಿಸಿ: ಲೇಖಕ ಯೆಹೋನಾಥಾನನ ಮನೆಗೆ ನನ್ನನ್ನು ಮತ್ತೆ ಕಳಿಸಬೇಡಿ. ಕಳಿಸಿದರೆ ನಾನು ಅಲ್ಲೇ ಸತ್ತೇನು. ನನ್ನ ಈ ಬಿನ್ನಹವನ್ನು ಅಂಗೀಕರಿಸಿ,” ಎಂದು ಅರಿಕೆಮಾಡಿದನು.


ಆ ಮೀನಿನ ಹೊಟ್ಟೆಯೊಳಗಿಂದಲೇ ಯೋನನು ಸರ್ವೇಶ್ವರಸ್ವಾಮಿ ದೇವರಿಗೆ ಈ ರೀತಿ ಪ್ರಾರ್ಥನೆ ಮಾಡಿದನು:


ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು