Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:57 - ಕನ್ನಡ ಸತ್ಯವೇದವು C.L. Bible (BSI)

57 ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು “ಭಯಪಡಬೇಡ” ಎಂದು ಅಭಯವಚನ ನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು ಭಯಪಡಬೇಡ ಎಂದು ಹೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:57
16 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು