Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:58 - ಕನ್ನಡ ಸತ್ಯವೇದವು C.L. Bible (BSI)

58 “ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ ನನ್ನ ಪ್ರಾಣವನ್ನು ಉಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. ನನ್ನ ಪ್ರಾಣವನ್ನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:58
13 ತಿಳಿವುಗಳ ಹೋಲಿಕೆ  

ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”


ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II


ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?


ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.


ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು