Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:66 - ಕನ್ನಡ ಸತ್ಯವೇದವು C.L. Bible (BSI)

66 ಸಿಟ್ಟುಗೊಂಡು ಅವರನ್ನು ಹಿಂದಟ್ಟು ನಿನ್ನ ಆಕಾಶದ ಕೆಳಗಿನಿಂದ ಅವರನ್ನು ಅಳಿಸಿಹಾಕು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದ ಅವರನ್ನು ಹಿಂಸಿಸಿ ಹಾಳುಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:66
14 ತಿಳಿವುಗಳ ಹೋಲಿಕೆ  

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


“ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ.


“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.


ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II


ಇಳಿಜಾರು, ಕಾರಿರುಳು ಇರುವ ಹಾದಿಯಲಿ I ಪ್ರಭುವಿನ ದೂತನವರನು ಓಡಿಸಿಬಿಡಲಿ II


ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.


ಬಿರುಗಾಳಿಗೆ ತರಗೆಲೆಯಂತೆ ತೂರಿಹೋಗಲಿ I ಪ್ರಭುವಿನ ದೂತನವರನು ಬೆನ್ನಟ್ಟಿ ಹೋಗಲಿ II


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ಆದರೆ ಈ ಇಸ್ರಯೇಲರು ಸತ್ಯವನ್ನು ತೊರೆದುಬಿಟ್ಟಿದ್ದಾರೆ. ಎಂತಲೇ ಶತ್ರುಗಳು ಅವರನ್ನು ಬೆನ್ನಟ್ಟಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು