Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:7
11 ತಿಳಿವುಗಳ ಹೋಲಿಕೆ  

ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ?


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಹಿಂದಟ್ಟಿ ಬಂದವರು ಹಿಡಿದರು ನಮ್ಮ ಕುತ್ತಿಗೆ ಬಳಲಿ ಬೆಂಡಾಗಿದ್ದೇವೆ ವಿಶ್ರಾಂತಿಯಿಲ್ಲದೆ.


ನನ್ನ ದಾರಿಗೆ ಅಡ್ಡವಾಗಿ ನೆಟ್ಟಿರುವನು ಮೊನಚು ಕಲ್ಲುಗಳನ್ನು, ಡೊಂಕು ಡೊಂಕು ಮಾಡಿರುವನು ನನ್ನ ಹಾದಿಯನ್ನು.


ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು