Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:8 - ಕನ್ನಡ ಸತ್ಯವೇದವು C.L. Bible (BSI)

8 ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:8
9 ತಿಳಿವುಗಳ ಹೋಲಿಕೆ  

ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ದೇವರೇ, ನಾನು ಮೊರೆಯಿಟ್ಟರೂ ಉತ್ತರಕೊಡದಿರುವೆ ನಾನೆದ್ದು ನಿಂತರೂ ನೀನು ಸುಮ್ಮನೆ ನೋಡುತ್ತಿರುವೆ.


‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ.


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


“ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ.


ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು