Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:9 - ಕನ್ನಡ ಸತ್ಯವೇದವು C.L. Bible (BSI)

9 ನನ್ನ ದಾರಿಗೆ ಅಡ್ಡವಾಗಿ ನೆಟ್ಟಿರುವನು ಮೊನಚು ಕಲ್ಲುಗಳನ್ನು, ಡೊಂಕು ಡೊಂಕು ಮಾಡಿರುವನು ನನ್ನ ಹಾದಿಯನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ, ಹಾದಿಗಳನ್ನು ಸುತ್ತುವರಿಯುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ ಹಾದಿಗಳನ್ನು ಸುತ್ತುಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. ಆತನು ನನ್ನ ಹಾದಿಯನ್ನು ಡೊಂಕುಗೊಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ, ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:9
6 ತಿಳಿವುಗಳ ಹೋಲಿಕೆ  

ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.


ಆತ ನನಗೆ ದಾರಿ ತಪ್ಪಿಸಿರುವನು ತುಂಡರಿಸಿ ದಿಕ್ಕಿಲ್ಲದವನಂತೆ ಮಾಡಿರುವನು.


ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.


ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ನನಗಾಗಿ ಆತ ಹೊಂಚುಹಾಕುತ್ತಿರುವನು ಕರಡಿಯಂತೆ ಗುಹೆಯಲ್ಲಿ ಅಡಗಿಕೊಂಡಿರುವನು ಸಿಂಹದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು