Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:15 - ಕನ್ನಡ ಸತ್ಯವೇದವು C.L. Bible (BSI)

15 ಅವರನ್ನು ನೋಡುವವರೂ “ತೊಲಗಿರಿ, ನೀವು ಅಶುದ್ಧರು ನಡೆಯಿರಿ, ನಡೆಯಿರಿ, ಮುಟ್ಟಬೇಡಿ” ಎಂದು ಕೂಗುತ್ತಿರುವರು. ಅವರು ಓಡಿ ಅನ್ಯನಾಡುಗಳಲ್ಲಿ ಅಲೆಯುತ್ತಿರಲು “ಇವರು ಇನ್ನು ಇಲ್ಲಿ ತಂಗಕೂಡದು” ಎನ್ನುತಿಹರು ಅಲ್ಲಿನ ನಾಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರನ್ನು ನೋಡುವವರು - ತೊಲಗಿರಿ, ಅಶುದ್ಧರು ನೀವು, ನಡೆಯಿರಿ, ನಡೆಯಿರಿ, ಮುಟ್ಟಬೇಡಿರಿ ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು - ಇವರು ಇನ್ನು ಇಲ್ಲಿ ತಂಗಬಾರದು ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ತೊಲಗಿಹೋಗಿ! ತೊಲಗಿಹೋಗಿ! ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. ಬೇರೆ ಜನಾಂಗಗಳ ಜನರು, “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:15
3 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.


ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು