Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:19 - ಕನ್ನಡ ಸತ್ಯವೇದವು C.L. Bible (BSI)

19 ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು. ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನು ಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು; ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:19
13 ತಿಳಿವುಗಳ ಹೋಲಿಕೆ  

“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


ಆದರೆ ಈ ಇಸ್ರಯೇಲರು ಸತ್ಯವನ್ನು ತೊರೆದುಬಿಟ್ಟಿದ್ದಾರೆ. ಎಂತಲೇ ಶತ್ರುಗಳು ಅವರನ್ನು ಬೆನ್ನಟ್ಟಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು