Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:2 - ಕನ್ನಡ ಸತ್ಯವೇದವು C.L. Bible (BSI)

2 ಅಯ್ಯೋ, ಅಪರಂಜಿಯಂತೆ ಅಮೂಲ್ಯವಾಗಿದ್ದ ಸಿಯೋನ್ ಪ್ರಜೆ ಇಂದು ಬೇಡವೆಂದು ಬಿಸಾಡಿದ ಕುಂಬಾರನ ಮಣ್ಣುಮಡಕೆ! ಅಮೂಲ್ಯವಾಗಿದ್ದರು ಸಿಯೋನಿನ ಪ್ರಜೆಗಳು ಅಪರಂಜಿಯಂತೆ ಅಯ್ಯೋ ಈಗ ಅವರಾಗಿಹರು ಕುಂಬಾರನೆ ಬಿಸಾಡಿದ ಮಡಕೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾಗಿದ ಚೀಯೋನಿನ ಪ್ರಜೆಗಳು, ಆದರೆ ಈಗ ಅವರು ಕುಂಬಾರನ ಕೈಕೆಲಸದ ಮಣ್ಣಿನ ಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಯ್ಯೋ, ಅಪರಂಜಿಯಷ್ಟು ಅಮೂಲ್ಯರಾದ ಚೀಯೋನಿನ ಪ್ರಜೆಗಳು ಕುಂಬಾರನ ಕೈಕೆಲಸದ ಮಣ್ಣುಮಡಿಕೆಗಳೋ ಎಂಬಂತೆ ತಿರಸ್ಕರಿಸಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೋ ಎಂಬಂತೆ ಪರಿಗಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:2
12 ತಿಳಿವುಗಳ ಹೋಲಿಕೆ  

ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”


ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.


ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಇವುಗಳಲ್ಲಿ ಕೆಲವು ಉತ್ತಮ ಬಳಕೆಗೂ ಇನ್ನೂ ಕೆಲವು ಸಾಮಾನ್ಯ ಬಳಕೆಗೂ ಬರುವುದುಂಟು.


ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.


ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ.


ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.


ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?


ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು : “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು


ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು