ಪ್ರಲಾಪಗಳು 4:21 - ಕನ್ನಡ ಸತ್ಯವೇದವು C.L. Bible (BSI)21 ‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಯುವತಿಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ [ರೋಷಪಾನದ] ಪಾತ್ರೆಯು ನಿನ್ನ ಪಾಲಿಗೂ ಬರುವದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಎದೋಮಿನ ಜನರೇ, ಸಂತೋಷವಾಗಿರಿ. ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. ನೀವು ಆ ಪಾತ್ರೆಯಿಂದ ಕುಡಿಯುವಾಗ ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ. ಅಧ್ಯಾಯವನ್ನು ನೋಡಿ |