Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:5 - ಕನ್ನಡ ಸತ್ಯವೇದವು C.L. Bible (BSI)

5 ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕೆಟ್ಟು ಅಲೆಯುತ್ತಾರೆ; ಚಿಕ್ಕತನದಿಂದಲೂ ಸಕಲಾತಿಯನ್ನು ಹೊದೆಯುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:5
17 ತಿಳಿವುಗಳ ಹೋಲಿಕೆ  

“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.


ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.


ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!


ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.


ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ?


ಮಲೆನಾಡಿನ ಭಾರಿಮಳೆಯಿಂದ ನೆನೆದುಹೋಗುತ್ತಾರೆ ಮರೆಯಿಲ್ಲದೆ ಕಲ್ಲುಬಂಡೆಗಳನು ಆಶ್ರಯಿಸುತ್ತಾರೆ.


ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು.


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು