ಪ್ರಲಾಪಗಳು 4:7 - ಕನ್ನಡ ಸತ್ಯವೇದವು C.L. Bible (BSI)7 ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು. ಅಧ್ಯಾಯವನ್ನು ನೋಡಿ |