Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:1 - ಕನ್ನಡ ಸತ್ಯವೇದವು C.L. Bible (BSI)

1 ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಮಗಾದ ದುರ್ಗತಿಯನ್ನು ನೆನಪಿಗೆ ತಂದುಕೋ; ನಾವು ಗುರಿಯಾಗಿರುವ ಅವಮಾನವನ್ನು ದೃಷ್ಟಿಸಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಮಗಾದ ದುರ್ಗತಿಯನ್ನು ಚಿತ್ತಕ್ಕೆ ತಂದುಕೋ; ನಾವು ಗುರಿಯಾಗಿರುವ ದೂಷಣೆಯನ್ನು ದೃಷ್ಟಿಸಿ ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:1
26 ತಿಳಿವುಗಳ ಹೋಲಿಕೆ  

ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


“ಸರ್ವೇಶ್ವರಾ, ನಿನ್ನ ಕಿವಿಗೆ ಬಿದ್ದಿದೆ ನನ್ನ ವೈರಿ ಕಲ್ಪಿಸಿದ ಕುಯುಕ್ತಿ.


ನಾನು ಪಟ್ಟ ಕಷ್ಟದುಃಖವನ್ನು ಮನಸ್ಸಿಗೆ ತಂದುಕೊಂಡಾಗ ಆಗುತ್ತಿದೆ ನನಗೆ ಕಹಿಯಾದ ಅನುಭವ.


ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !


ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


“ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ.


ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II


ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.


ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು