Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:12 - ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರಾಜಪುತ್ರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ; ವೃದ್ಧರು ಮಾನಭಂಗಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸರದಾರರ ಕೈಗಳನ್ನು ಗಲ್ಲಿಗೆ ನೇತಕಟ್ಟಿದರು; ವೃದ್ಧರು ಮಾನಭಂಗಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:12
8 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು