Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:14 - ಕನ್ನಡ ಸತ್ಯವೇದವು C.L. Bible (BSI)

14 ಮುದುಕರು ಇನ್ನು ಕೂರುತ್ತಿಲ್ಲ ಚಾವಡಿಗಳಲಿ ಯುವಕರು ಇನ್ನು ಹಿಡಿಯುತ್ತಿಲ್ಲ ವಾದ್ಯಗಳನ್ನು ಕೈಯಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವೃದ್ಧರು ಇನ್ನು ಚಾವಡಿಯಲ್ಲಿ ಸೇರರು, ಯುವಕರು ಇನ್ನು ವಾದ್ಯಬಾರಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪಟ್ಟಣದ ದ್ವಾರಗಳ ಬಳಿಯಿಂದ ಹಿರಿಯರು ಹೊರಟುಹೋಗಿದ್ದಾರೆ. ಯುವಕರು ಸಂಗೀತ ನುಡಿಸುವುದನ್ನು ನಿಲ್ಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:14
15 ತಿಳಿವುಗಳ ಹೋಲಿಕೆ  

ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.


“ಎಲೈ ಬಾಬಿಲೋನೇ , ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ !


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.


ಅಳುವ ಧ್ವನಿ ಕೇಳಿಸುತ್ತಿದೆ ನನ್ನ ಕೊಳಲಿನಲಿ ಗೋಳಾಟದ ಸ್ವರವಿದೆ ನನ್ನ ಕಿನ್ನರಿಯಲಿ.”


“ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು