Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:16 - ಕನ್ನಡ ಸತ್ಯವೇದವು C.L. Bible (BSI)

16 ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:16
25 ತಿಳಿವುಗಳ ಹೋಲಿಕೆ  

ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II


ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.


ನನ್ನ ಘನತೆಯನ್ನು ಸುಲಿದುಬಿಟ್ಟಿದ್ದಾನೆ ನನ್ನ ಕಿರೀಟವನ್ನು ಕಿತ್ತುಹಾಕಿದ್ದಾನೆ.


ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ !


ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿನ್ನ ರುಮಾಲನ್ನು ಕಿತ್ತುಬಿಡು, ಕಿರೀಟವನ್ನು ತೆಗೆದುಹಾಕು. ಎಲ್ಲವೂ ಮೊದಲಿದ್ದ ಹಾಗೆ ಇರುವುದಿಲ್ಲ; ಕೆಳಗಿರುವುದನ್ನು ಮೇಲೆ ಸೇರಿಸಲಾಗುವುದು, ಮೇಲಿರುವುದನ್ನು ಕೆಳಕ್ಕಿಳಿಸಲಾಗುವುದು.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ !


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.


ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.


ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು