Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:22 - ಕನ್ನಡ ಸತ್ಯವೇದವು C.L. Bible (BSI)

22 ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು; ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:22
13 ತಿಳಿವುಗಳ ಹೋಲಿಕೆ  

ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.


ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.


ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು