Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:5 - ಕನ್ನಡ ಸತ್ಯವೇದವು C.L. Bible (BSI)

5 ಹಿಂದಟ್ಟಿ ಬಂದವರು ಹಿಡಿದರು ನಮ್ಮ ಕುತ್ತಿಗೆ ಬಳಲಿ ಬೆಂಡಾಗಿದ್ದೇವೆ ವಿಶ್ರಾಂತಿಯಿಲ್ಲದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಮ್ಮನ್ನು ಹಿಂದಟ್ಟುವವರು ನಮ್ಮ ಹೆಗ್ಗತ್ತನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:5
14 ತಿಳಿವುಗಳ ಹೋಲಿಕೆ  

“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ !


ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.


“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು