Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:8 - ಕನ್ನಡ ಸತ್ಯವೇದವು C.L. Bible (BSI)

8 ದಾಸರುಗಳೇ ನಮಗೆ ದಣಿಗಳಾದರು ಅವರಿಂದ ನಮ್ಮನ್ನು ಬಿಡಿಸುವವರಾರೂ ಇಲ್ಲವಾದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾಸರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:8
12 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ಅವು ಯಾವುವೆಂದರೆ: ಅರಸನಾದ ಆಳು, ಹೊಟ್ಟೆ ತುಂಬಿಸಿಕೊಂಡು ಸುತ್ತಾಡುವ ನೀಚ,


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಆಶ್ರಯ ಎಂಬುದು ಅವನ ಮಕ್ಕಳಿಗಿಲ್ಲ ನ್ಯಾಯಸ್ಥಾನದಲ್ಲಿ ಗೆಲುವು ಅವರಿಗಿಲ್ಲ ಅವರನ್ನು ಬಿಡಿಸತಕ್ಕವರಾರೂ ಇಲ್ಲ.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ನಿಮ್ಮ ಮಧ್ಯೆಯಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆ ಆಗುತ್ತಾ ಹೀನಸ್ಥಿತಿಗೆ ಇಳಿಯುವಿರಿ.


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು