ಪ್ರಸಂಗಿ 1:16 - ಕನ್ನಡ ಸತ್ಯವೇದವು C.L. Bible (BSI)16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ". ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ಮನಸ್ಸಿನಲ್ಲಿ ಯೋಚಿಸುತ್ತಾ - ಆಹಾ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ; ನನ್ನ ಹೃದಯವು ಜ್ಞಾನವನ್ನೂ ತಿಳುವಳಿಕೆಯನ್ನೂ ವಿಶೇಷವಾಗಿ ಹೊಂದಿದೆ ಎಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.” ಅಧ್ಯಾಯವನ್ನು ನೋಡಿ |