Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:17 - ಕನ್ನಡ ಸತ್ಯವೇದವು C.L. Bible (BSI)

17 ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಜ್ಞಾನವನ್ನಲ್ಲದೆ ಮರುಳುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ಎಂದು ಅರಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:17
14 ತಿಳಿವುಗಳ ಹೋಲಿಕೆ  

ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,


ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!


ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.


ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಇದರ ಮರ್ಮವನು ನಾ ಬಗೆಹರಿಸಲು ಯತ್ನಿಸೆ I ತೋಚಿತೆನಗಿದು ಬಿಡಿಸಲಾಗದಂಥ ಸಮಸ್ಯೆ II


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.


ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.


“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು