Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:6 - ಕನ್ನಡ ಸತ್ಯವೇದವು C.L. Bible (BSI)

6 ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುವುದು. ಅದು ಸುತ್ತುತ್ತಾ ಸುತ್ತುತ್ತಾ ಹೋಗಿ, ಗಾಳಿ ಸುತ್ತಳತೆಯ ಪ್ರಕಾರ ಹಿಂದಿರುಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗಾಳಿಯು ತೆಂಕಣಕ್ಕೆ ಬೀಸಿ ಬಡಗಣಕ್ಕೆ ತಿರುಗುವದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:6
11 ತಿಳಿವುಗಳ ಹೋಲಿಕೆ  

ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.


ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.


ಆ ಬಿರುಗಾಳಿಯನಾತ ಶಾಂತಪಡಿಸಿದ I ನಿಂತುಹೋಯಿತಾ ಸಮುದ್ರದಲೆಗಳ ಮೊರೆತ II


ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II


ತೆಂಕಣಗಾಳಿಯಿಂದ ಪೊಡವಿ ತಪಿಸಿ ಸ್ತಬ್ದವಿರುವಾಗಲೆ ನಿನ್ನ ಬಟ್ಟೆಬರೆ ಬಿಸಿಯಿರುವಾಗಲೆ ಆ ಅರಿವು ನಿನಗಿರುತ್ತದೆಯೇ?


ದೇವರ ಭಂಡಾರದಿಂದ ಬಿರುಗಾಳಿ ಬೀಸುತ್ತದೆ ಉತ್ತರ ದಿಕ್ಕಿನಿಂದ ಚಳಿ ಹೊರಬರುತ್ತದೆ.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.


ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.


ನದಿಗಳು ಹರಿದು ಸಮುದ್ರವನ್ನು ಸೇರುತ್ತವೆ, ಆದರೂ ಸಮುದ್ರವು ತುಂಬುವುದಿಲ್ಲ. ಅವು ಎಲ್ಲಿಂದ ಹರಿದು ಬರುತ್ತವೋ ಅಲ್ಲಿಗೆ ಹಿಂತಿರುಗಿ ಹೋಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು