Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:11 - ಕನ್ನಡ ಸತ್ಯವೇದವು C.L. Bible (BSI)

11 ಹಾವಾಡಿಗ ಹಾವಾಡಿಸುವುದಕ್ಕೆ ಮುಂಚೆಯೇ ಹಾವಿನಿಂದ ಕಡಿಸಿಕೊಂಡರೆ ಏನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಯಾವ ಪ್ರಯೋಜನವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮಂತ್ರಿಸಿ ತಡೆಯುವದರೊಳಗಾಗಿ ಹಾವು ಕಚ್ಚಿದರೆ ಮಂತ್ರಿಸುವವನಿಗೆ ಏನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಾವುಗಳನ್ನು ಹಿಡಿಯಬಲ್ಲವನು ಇಲ್ಲದಿರುವಾಗ ಹಾವು ಬೇರೊಬ್ಬನನ್ನು ಕಚ್ಚಿದರೆ ಹಾವು ಹಿಡಿಯುವವನಿಂದ ಪ್ರಯೋಜನವೇನು? ಜ್ಞಾನವು ಸಹ ಹಾಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:11
9 ತಿಳಿವುಗಳ ಹೋಲಿಕೆ  

ಸರ್ವೇಶ್ವರ : “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಬಿಡುವೆನು. ಅವು ಮಾಯಮಂತ್ರಕ್ಕೆ ಬಾಗದ ನಾಗಸರ್ಪಗಳು ! ಅವು ನಿಮ್ಮನ್ನು ಕಚ್ಚದೆ ಬಿಡವು.”


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಆದರೆ ನಾಲಿಗೆಯನ್ನಾದರೋ ಹತೋಟಿಗೆ ತರಲು ಯಾರಿಗೂ ಸಾಧ್ಯವಿಲ್ಲ. ಅದು ಸತತ ಕೇಡನ್ನುಂಟುಮಾಡುವ ಕಿಡಿ; ಮೃತ್ಯುಮಾರಕ ವಿಷಕೊಂಡಿ.


ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.


ಮುರಿದುಬಿಡು ಹೇ ದೇವಾ, ಆ ದುರುಳರ ಹಲ್ಲುಗಳನು I ಕಿತ್ತುಬಿಡು ಪ್ರಭು, ಆ ಪ್ರಾಯಸಿಂಹಗಳ ಕೋರೆಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು