Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:12 - ಕನ್ನಡ ಸತ್ಯವೇದವು C.L. Bible (BSI)

12-13 ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜ್ಞಾನಿಯ ಮಾತು ಹಿತ; ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:12
36 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.


ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.


ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.


ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.


ನನ್ನನ್ನು ಸುತ್ತುವರೆದಿರುವವರು ತಲೆಯೆತ್ತದಿರಲಿ I ಅವರಾಡುವ ಕೇಡು ಅವರ ತಲೆಯ ಮೇಲೇ ಎರಗಲಿ II


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


ಕೈಕಟ್ಟಿಕೊಂಡು ಕುಳಿತುಕೊಳ್ಳುವ ಮೈಗಳ್ಳನಾದ ಮೂಢನಿಗೆ ಅವನ ಒಡಲೇ ಊಟ.


ಹುಚ್ಚರ ಕೂಟದಲ್ಲಿ ಕೇಳಿಬರುವ ಅಧ್ಯಕ್ಷನ ಕೂಗಾಟಕ್ಕಿಂತ ಜ್ಞಾನಿಯ ಮೆಲ್ಲನೆಯ ಮಾತು ಕಿವಿಗೆ ಲೇಸು.


ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.


ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.


ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು