ಪ್ರಸಂಗಿ 10:14 - ಕನ್ನಡ ಸತ್ಯವೇದವು C.L. Bible (BSI)14 ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೋ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ. ಅಧ್ಯಾಯವನ್ನು ನೋಡಿ |