ಪ್ರಸಂಗಿ 10:17 - ಕನ್ನಡ ಸತ್ಯವೇದವು C.L. Bible (BSI)17 ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇಶವೇ, ನಿನ್ನ ರಾಜನು ಕುಲೀನನಾಗಿದ್ದು ಪ್ರಭುಗಳು ಅಮಲನ್ನೊಲ್ಲದೆ ಶಕ್ತಿಗೊಳ್ಳುವೆವೆಂದು ಸರಿಯಾದ ಸಮಯದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟುಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ. ಅಧ್ಯಾಯವನ್ನು ನೋಡಿ |