Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:2 - ಕನ್ನಡ ಸತ್ಯವೇದವು C.L. Bible (BSI)

2 ಜ್ಞಾನಿಯ ಬುದ್ಧಿ ಬಲಗೈಯಾದರೆ ಅಜ್ಞಾನಿಯ ಬುದ್ಧಿ ಎಡಗೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವುದು. ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜ್ಞಾನಿಯ ಬುದ್ಧಿಯು ಅವನ ಬಲಗಡೆಯಿರುವದು, ಅಜ್ಞಾನಿಯ ಬುದ್ಧಿಯು ಅವನ ಎಡಗಡೆಯಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜ್ಞಾನಿಯ ಆಲೋಚನೆಗಳು ಅವನನ್ನು ಸರಿಯಾದ ದಾರಿಯಲ್ಲಿ ನಡೆಸುತ್ತವೆ. ಆದರೆ ಮೂಢನ ಆಲೋಚನೆಗಳು ಅವನನ್ನು ತಪ್ಪಾದ ದಾರಿಯಲ್ಲಿ ನಡೆಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, ಮೂರ್ಖನ ಹೃದಯವು ಎಡಗಡೆ ಸಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:2
11 ತಿಳಿವುಗಳ ಹೋಲಿಕೆ  

ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?


ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು.


ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು