Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:5 - ಕನ್ನಡ ಸತ್ಯವೇದವು C.L. Bible (BSI)

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ದೊರೆಯ ಪ್ರಮಾದದಿಂದಾದದ್ದೆಂದು ತೋರುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:5
10 ತಿಳಿವುಗಳ ಹೋಲಿಕೆ  

ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಧರೆಯಲ್ಲಿ ಮಾನವರಿಗೆ ಬಂದೊದಗುವ ದೊಡ್ಡ ದುರವಸ್ಥೆ ಒಂದನ್ನು ಕಂಡೆ.


ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆ. ಒಬ್ಬಂಟಿಗನಾದ ಮನುಷ್ಯನೊಬ್ಬ ಇದ್ದ. ಅವನಿಗೆ ಅಣ್ಣತಮ್ಮಂದಿರು ಇರಲಿಲ್ಲ. ಮಕ್ಕಳುಮರಿ ಇರಲಿಲ್ಲ. ಆದರೂ ಅವನ ದುಡಿಮೆಗೆ ಎಲ್ಲೆ ಇರಲಿಲ್ಲ. ಆಸ್ತಿಪಾಸ್ತಿಯಿಂದ ಅವನ ಕಣ್ಣಿಗೆ ತೃಪ್ತಿ ಇರಲಿಲ್ಲ.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.


ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.


ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.


ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ.


ಭೋಗಜೀವನ ಬುದ್ಧಿಹೀನನಿಗೆ ಯೋಗ್ಯವಲ್ಲ; ದೊರೆಗಳ ಮೇಲೆ ದೊರೆತನ ದಾಸನಿಗೆ ತಕ್ಕುದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು