Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:8 - ಕನ್ನಡ ಸತ್ಯವೇದವು C.L. Bible (BSI)

8 ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಗೋಡೆಯೊಡೆಯುವವನನ್ನು ಹಾವು ಕಚ್ಚುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:8
13 ತಿಳಿವುಗಳ ಹೋಲಿಕೆ  

ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.


ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.


ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.


ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.


ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II


ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.


ಬಂಡೆ ಸೀಳುವವನು ಬಂಡೆಯಿಂದಲೇ ಗಾಯಗೊಳ್ಳುವನು; ಮರಕಡಿಯುವವನು ಅದರಿಂದಲೇ ಅಪಾಯಕ್ಕೆ ಗುರಿಯಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು