Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:10 - ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:10
14 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.


ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.


ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.


ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II


ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.


ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು