Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:2
22 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು.


“ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ,” ಎಂದು ಯೇಸು ಉತ್ತರವಿತ್ತರು.


ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”


ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.


ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.


ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.


ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು