Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:10 - ಕನ್ನಡ ಸತ್ಯವೇದವು C.L. Bible (BSI)

10 ಹಿತಕರವಾದ ವಚನಗಳನ್ನು ಅವನು ಹುಡುಕಿ ಆರಿಸಿದ; ಅವನಿಂದ ರಚಿತವಾದವು ಸರಿಯಾದುವು, ಸತ್ಯವಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪ್ರಸಂಗಿಯು ಯಥಾರ್ಥಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಸಂಗಿಯು ಸರಿಯಾದ ಪದಗಳನ್ನು ಪ್ರಯಾಸದಿಂದ ಕಂಡುಹಿಡಿದು ಬಳಸಿದನು; ಸತ್ಯವೂ ಭರವಸೆಗೆ ಯೋಗ್ಯವೂ ಆದ ಉಪದೇಶಗಳನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:10
14 ತಿಳಿವುಗಳ ಹೋಲಿಕೆ  

ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.


ದಾವೀದನ ಮಗನೂ ಜೆರುಸಲೇಮನ್ನು ಆಳುವ ಅರಸನೂ ಆದ ಉಪದೇಶಕನ ಪ್ರವಚನಗಳು:


ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.


ಉಪದೇಶಕನಾದ ನಾನು ಜೆರುಸಲೇಮಿನಲ್ಲಿ ಇಸ್ರಯೇಲರಿಗೆ ಅರಸನಾಗಿದ್ದೆ.


ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು