Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:13 - ಕನ್ನಡ ಸತ್ಯವೇದವು C.L. Bible (BSI)

13 ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13-14 ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:13
27 ತಿಳಿವುಗಳ ಹೋಲಿಕೆ  

“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.


ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಕನಸುಗಳು ಎಷ್ಟೋ ಬೀಳಬಹುದು. ಮಾತುಕತೆಗಳು ಎಷ್ಟೋ ನಡೆಯಬಹುದು. ನೀನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ : “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.


ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.


ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು