Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:14 - ಕನ್ನಡ ಸತ್ಯವೇದವು C.L. Bible (BSI)

14 ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:14
17 ತಿಳಿವುಗಳ ಹೋಲಿಕೆ  

ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


“ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು.


ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.


ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.”


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು