ಪ್ರಸಂಗಿ 12:3 - ಕನ್ನಡ ಸತ್ಯವೇದವು C.L. Bible (BSI)3 ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬೊಗ್ಗುವರು, ಅರೆಯುವವರು ಕೊಂಚವಾದದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆ ಸಮಯದಲ್ಲಿ, ನಿನ್ನ ಬಲಿಷ್ಠವಾದ ತೋಳುಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ; ನಿನ್ನ ಬಲಿಷ್ಠವಾದ ಕಾಲುಗಳು ಬಲಹೀನವಾಗಿ ಬಗ್ಗಿಹೋಗುತ್ತವೆ; ನಿನ್ನ ಹಲ್ಲುಗಳು ಬಿದ್ದುಹೋಗುತ್ತವೆ; ಆಗ ನೀನು ಆಹಾರವನ್ನು ಅಗಿದು ತಿನ್ನಲಾರೆ. ನಿನ್ನ ಕಣ್ಣುಗಳು ಮೊಬ್ಬಾಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು. ಅಧ್ಯಾಯವನ್ನು ನೋಡಿ |