ಪ್ರಸಂಗಿ 12:4 - ಕನ್ನಡ ಸತ್ಯವೇದವು C.L. Bible (BSI)4 ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿಹೋಗುವುದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬೀದಿಯ ಬಾಗಿಲುಗಳು ಮುಚ್ಚಿರುವವು; ಅರೆಯುವ ಸ್ಥಳದ ಶಬ್ದವು ತಗ್ಗಿ ಹಕ್ಕಿಯ ಧ್ವನಿಯಷ್ಟು ಕೀರ್ಲಾಗುವದು; ಗಾಯಕಿಯರೆಲ್ಲಾ ಕುಗ್ಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಕಿವಿ ಮಂದವಾಗುತ್ತದೆ. ನೀನು ಮಾರುಕಟ್ಟೆಯ ಶಬ್ದವನ್ನೂ ಕೇಳಲಾರೆ. ಅರೆಯುವ ಕಲ್ಲು ಸಹ ನಿನಗೆ ತುಂಬ ಮೌನವಾಗಿದೆಯೋ ಎಂಬಂತೆ ತೋರುವುದು. ಗಾಯನವೂ ನಿನಗೆ ಕೇಳುವುದಿಲ್ಲ. ನಿನಗೆ ನಿದ್ರೆಬಾರದಿರುವುದರಿಂದ ಕೇವಲ ಒಂದು ಹಕ್ಕಿಯ ಧ್ವನಿಯು ನಿನ್ನನ್ನು ಹೊತ್ತಾರೆಯಲ್ಲಿ ಎಬ್ಬಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಬೀದಿ ಬಾಗಿಲುಗಳು ಮುಚ್ಚಿರುವುವು, ಅರೆಯುವ ಶಬ್ದವು ಕಡಿಮೆಯಾಗುವುದು; ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. ಮುಂಜಾನೆಯ ಗಾನಸ್ವರ ಮಂದವಾಗುವುದು. ಅಧ್ಯಾಯವನ್ನು ನೋಡಿ |