Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:7 - ಕನ್ನಡ ಸತ್ಯವೇದವು C.L. Bible (BSI)

7 ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:7
23 ತಿಳಿವುಗಳ ಹೋಲಿಕೆ  

ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಉಸಿರುಹೋದುದೇ ಮರಳುತ್ತಾನವನು ಮಣ್ಣಿಗೆ I ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ II


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II


ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.


“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?


ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.


ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು