Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:1 - ಕನ್ನಡ ಸತ್ಯವೇದವು C.L. Bible (BSI)

1 “ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಮನಸ್ಸಿನಲ್ಲಿ, “ಈಗ ಬಾ, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು. ಸುಖವನ್ನು ಅನುಭವಿಸು” ಅಂದುಕೊಂಡೆನು. ಆಹಾ! ಇದು ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಮನಸ್ಸಿನಲ್ಲಿ, - ಬಾ, ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಸುಖದ ರುಚಿ ನೋಡು ಅಂದುಕೊಂಡೆನು. ಆಹಾ, ಇದೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಈಗ ಬಾ, ಯಾವುದು ಒಳ್ಳೆಯದು ಎಂಬುದನ್ನು ಸುಖಭೋಗಗಳಿಂದ ನಿನ್ನನ್ನು ಪರೀಕ್ಷಿಸುವೆನು,” ಎಂದು ನನ್ನ ಮನಸ್ಸಿನಲ್ಲಿ ಹೇಳಿಕೊಂಡೆ. ಆದರೆ ಅದೂ ಕೂಡ ವ್ಯರ್ಥವಾದದ್ದೆಂದು ರುಜುವಾತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:1
27 ತಿಳಿವುಗಳ ಹೋಲಿಕೆ  

ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


“ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ : ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ಜ್ಞಾನಿಯ ಹೃದಯ ಶೋಕದ ಆಲಯ; ಮೂಢನ ಹೃದಯ ಹಿಗ್ಗಿನ ನಿಲಯ.


“ಮೂಢನಿಗೆ ಸಂಭವಿಸುವ ಗತಿ ನನಗೂ ಸಂಭವಿಸುವುದಾದರೆ ನನ್ನ ಹೆಚ್ಚಿನ ಜ್ಞಾನದಿಂದ ಪ್ರಯೋಜನವೇನು? ಇದೂ ವ್ಯರ್ಥವೇ!” ಎಂದುಕೊಂಡೆ.


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


ನೆನೆವನು ಮನದೊಳು ದುರುಳನಿಂತು: I “ಯಾರಿಗೂ ನನ್ನ ಕದಲಿಸಲಾಗದು I ಬಾರದು ನನಗೆಂದಿಗು ಆಪತ್ತು” II


ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ನಗೆಯಲ್ಲೂ ಅಳು ಉಂಟು; ನಲಿವು ನೋವಾಗಿ ಕೊನೆಗೊಳ್ಳುವುದುಂಟು.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.


ದೇವರಿಲ್ಲದೆ ಯಾರಿಗೆ ಊಟ ದೊರಕೀತು? ಅವರಿಲ್ಲದೆ ಸುಖಾನುಭವ ಯಾರಿಗೆ ದೊರಕೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು