Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:10
21 ತಿಳಿವುಗಳ ಹೋಲಿಕೆ  

ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.


ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II


ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ಲೋಕದಲ್ಲಿ ಮಾನವನು ಹೃತ್ಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?


ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.


ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು.


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.


“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು