Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:12 - ಕನ್ನಡ ಸತ್ಯವೇದವು C.L. Bible (BSI)

12 ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. ಜ್ಞಾನವೆಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳ ಬಗ್ಗೆ ಮತ್ತೆ ಚಿಂತಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ರಾಜನ ಪ್ರಯತ್ನವಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುವದು ಎಂದುಕೊಂಡು ಜ್ಞಾನವನ್ನೂ ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವದಕ್ಕೆ ತಿರುಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರಾಜನಿಗಿಂತ ಹೆಚ್ಚಾಗಿ ಮಾಡಲು ಬೇರೆ ಯಾರಿಗೂ ಸಾಧ್ಯವಿಲ್ಲ. ನೀನು ಮಾಡಬೇಕೆನ್ನುವುದನ್ನು ನಿನಗಿಂತ ಮೊದಲೇ ಬೇರೊಬ್ಬ ರಾಜನು ಮಾಡಿರುತ್ತಾನೆ; ಆದ್ದರಿಂದ ರಾಜನ ಕಾರ್ಯಗಳು ಸಹ ವ್ಯರ್ಥವೆಂದು ಕಂಡುಕೊಂಡೆನು. ಆದ್ದರಿಂದ ನಾನು ಜ್ಞಾನವನ್ನೂ ಮೂಢತನವನ್ನೂ ಬುದ್ಧಿಹೀನತೆಯನ್ನೂ ಮತ್ತೆ ಮತ್ತೆ ಆಲೋಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ಜ್ಞಾನವನ್ನೂ ಮನಗುಂದುವಿಕೆಯನ್ನೂ ಮೂಡತೆಯನ್ನೂ ಮತ್ತೆ ಯೋಚಿಸುವುದಕ್ಕೆ ನಾನು ತಿರುಗಿಕೊಂಡೆನು. ಈಗಾಗಲೇ ಮಾಡಿದ್ದನ್ನು ಬಿಟ್ಟು, ಅರಸನ ತರುವಾಯ ಬರುವವನು ಹೊಸದಾಗಿ ಏನು ಮಾಡಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:12
4 ತಿಳಿವುಗಳ ಹೋಲಿಕೆ  

ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.


ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ.


ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ; ಗತಿಸಿಹೋದದ್ದನ್ನು ದೇವರು ಮರಳಿ ಬರಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು