Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:18 - ಕನ್ನಡ ಸತ್ಯವೇದವು C.L. Bible (BSI)

18 ನನ್ನ ದುಡಿಮೆಯ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕಲ್ಲಾ ಎಂದು ಲೋಕದಲ್ಲಿ ನಾನು ಪಟ್ಟ ಪ್ರಯಾಸದ ಬಗ್ಗೆ ಬೇಸರಗೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆಲ್ಲಾ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:18
19 ತಿಳಿವುಗಳ ಹೋಲಿಕೆ  

ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.


ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.


ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ.


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.


ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ದೊರಕುವ ಲಾಭವಾದರೂ ಏನು?


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.


ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು